ಅನಧಿಕೃತ ಧಾರ್ಮಿಕ ಕಟ್ಟಡದ ತೆರವು ಪ್ರಕರಣದ ವಿಚಾರಣೆಯನ್ನು ಮೂಂದೂಡಿದ ಕರ್ನಾಟಕ ಹೈಕೋರ್ಟ್

Prasthutha|

ಬೆಂಗಳೂರು: ಅನಧಿಕೃತ ಧಾರ್ಮಿಕ ಕಟ್ಟಡವನ್ನು ಸುಪ್ರೀಮ್ ಕೋರ್ಟ್ ನ ಆದೇಶದನ್ವಯ ತೆರೆವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ಅರ್ಜಿಯನ್ನು ಹೈಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ. ನಂಜನಗೂಡು ಹುಚ್ಚಗಣಿಯಲ್ಲಿ ಅನಧಿಕೃತ ದೇವಾಲಯವೊಂದನ್ನು ಕೆಡವಿ ಹಾಕಿದ್ದ ಪ್ರಸಂಗ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿತ್ತು. ಮಾತ್ರವಲ್ಲ ಈ ಪ್ರಕರಣ ರಾಜಕೀಯ ಮೇಲಾಟದ ಜೊತೆಗೆ ಸಾಕಷ್ಟು ಪ್ರತಿಭಟನೆಗೆ ನಾಂದಿ ಹಾಡಿತ್ತು.

- Advertisement -

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಈ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಮ್ ಕೊರ್ಟ್ ಆದೇಶ ನೀಡಿದ ನಿಟ್ಟಿನಲ್ಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ರವನ್ನೊಳಗೊಂಡ ವಿಭಾಗೀಯ ಪೀಠವು ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ.

ಸರ್ಕಾರದ ಪರವಾಗಿ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ವಾದಿಸಿದರು.

- Advertisement -

ಸುಪ್ರೀಮ್ ಕೋರ್ಟ್ ನ 2009 ರ ಆದೇಶದನ್ವಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ತಲೆ ಎತ್ತಿದ 277 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸುತ್ತೋಲೆಯನ್ನು ಹೊರಡಿಸಲಾಗಿತ್ತು.



Join Whatsapp