ಆರ್ಥಿಕತೆ ಸುಧಾರಣೆಯ ಕ್ರಮಕ್ಕೆ ಒತ್ತಾಯಿಸಿ ಪ್ರಧಾನಿಗೆ ಬರೆದ 12 ಪತ್ರಗಳನ್ನು ಕಡೆಗಣಿಸಲಾಗಿದೆ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

Prasthutha|

ನವದೆಹಲಿ: ಪ್ರಸಕ್ತ ಕುಸಿತಕ್ಕೊಳಗಾಗಿರುವ ದೇಶದ ಆರ್ಥಿಕತೆಯ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಕೋರಿ ಪ್ರಧಾನಿ ಮೋದಿಗೆ ನಾನು ಬರೆದ 12 ಪತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.

- Advertisement -

ಹದಗೆಟ್ಟ ದೇಶದ ಆರ್ಥಿಕತೆಯನ್ನು ಸರಿಪಡಿಸುವಂತೆ ಸಲಹೆ ನೀಡಿ ಹಲವಾರು ಜನರು ಕರೆ ಮಾಡುತ್ತಿದ್ದಾರೆ. ಸಣ್ಣ ಮತ್ತು ಮಧ್ಯಮ ವ್ಯಾಪಾರಿಗಳು ಪ್ರಧಾನಿಗೆ ಕರೆ ಮಾಡಿ ದೇಶದ ಆರ್ಥಿಕ ಕುಸಿತದಿಂದಾಗಿ ವ್ಯವಹಾರ ನಡೆಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾನು ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೆ ಈ ಪತ್ರದ ಅಂಶಗಳನ್ನು ಅವರು ಪರಿಗಣಿಸಿಲ್ಲ ಎಂದು ಟ್ವೀಟ್ ಮೂಲಕ ವಿಷಾದಿಸಿದ್ದಾರೆ.

ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿಯನ್ನು ಸಂಪರ್ಕಿಸಿದ ಸುದ್ದಿಗಾರರು ಸಂಸದ ಸುಬ್ರಮಣಿಯನ್ ಸ್ವಾಮಿ ಕುರಿತು ಪ್ರತಿಕ್ರಿಯೆ ಕೇಳಿದಾಗ, ಅವರು ಪ್ರೀ ಲ್ಯಾನ್ಸರ್ ರಾಜಕಾರಣಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮೂದಲಿಸಿದ್ದರು. ಇದಕ್ಕೆ ಕೆಂಡಾಮಂಡಲವಾದ ಸುಬ್ರಮಣಿಯನ್ ಸ್ವಾಮಿ “ ಅಧಿಕಾರಕ್ಕಾಗಿ ಬೂಟು ನೆಕ್ಕುವ ರಾಜಕಾರಣಿ ನಾನಲ್ಲ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಗೆ ತಿರುಗೇಟು ನೀಡಿದ್ದರು. ಮಾತ್ರವಲ್ಲ ಲಸಿಕೆ ಸಂಭ್ರಮದ ಮಧ್ಯೆ ಸರ್ಕಾರದ ತಪ್ಪು ನೀತಿಯಿಂದಾಗಿ ಕುಸಿಯುತ್ತಿರುವ ಆರ್ಥಿಕತೆಯ ಬಗ್ಗೆ ಎಚ್ಚರ ವಹಿಸಬೇಕಾಗಿದೆ ಎಂದು ಅವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.



Join Whatsapp