ಬೆಂಗಳೂರು: ವಿಭಿನ್ನ ಧರ್ಮಕ್ಕೆ ಸೇರಿದ ಜೋಡಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಅವರನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸೂಚಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಆರೋಪಿಗಳ ರಕ್ಷಣೆಗೆ ಮುಂದಾಗದೆ ಕಠಿಣ ಸೆಕ್ಷನ್ ಅಡಿಯಲ್ಲಿ ಬಂಧಿಸುವಂತೆ ಸೂಚಿಸಿದರು. ನನ್ನ ಸರ್ಕಾರ ಇಂತಹ ಘಟನೆಗಳ ವಿರುದ್ಧ ಕಠಿಣ ನಿಲುವು ತಾಳುತ್ತದೆ ಎಂದು ಅವರು ತಿಳಿಸಿದ್ದಾರೆ.