ನಿರ್ಮಾಣ ಹಂತದ ಮಸೀದಿ ತೆರವಿಗೆ ಹೈಕೋರ್ಟ್ ಆದೇಶ

Prasthutha|

ಬೆಂಗಳೂರು: ದೇವಸ್ಥಾನಗಳ ಬೆನ್ನಲ್ಲೇ ನಿರ್ಮಾಣ ಹಂತದಲ್ಲಿರುವ ಮಸೀದಿಯನ್ನು ತೆರವುಗೊಳಿಸಲು ಹೈಕೋರ್ಟ್ ಆದೇಶಿಸಿದೆ.  

- Advertisement -

ಈಗಾಗಲೇ ಹೈಕೋರ್ಟ್ ಆದೇಶದಿಂದಾಗಿ ಮೈಸೂರಿನ ಕೆಲವು ದೇವಾಲಯಗಳನ್ನು ತೆರವುಗೊಳಿಸಲಾಗಿತ್ತು. ನಂತರ ತೆರವುಗೊಂಡ ಜಾಗದಲ್ಲಿಯೇ ದೇವಾಲಯ ನಿರ್ಮಾಣದ ನಿರ್ಣಯವನ್ನು ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಕೈಗೊಂಡಿತ್ತು. ಇದರ ಬೆನ್ನಲ್ಲೇ, ನಿರ್ಮಾಣ ಹಂತದಲ್ಲಿರುವ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿ ತೆರವಿಗೆ ಬಿಬಿಎಂಪಿಗೆ ನಿರ್ದೇಶಿಸಿದೆ.

- Advertisement -

ನಿರ್ಮಾಣ ಹಂತದಲ್ಲಿರುವ ಮಸೀದಿ ಕುರಿತಂತೆ ಸ್ಥಳೀಯ ನಿವಾಸಿ ಶ್ಯಾಮ್ ಫಿಲಿಪ್ ಹಾಗೂ ಮತ್ತಿತರರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಮಸೀದಿ ತೆರವಿಗೆ ಆದೇಶಿಸಿದೆ.



Join Whatsapp