ಮುಂಬೈ : ಮುಸುಕುಧಾರಿ ದುಷ್ಕರ್ಮಿಗಳ ಗುಂಪು ರಾಡ್ ನಿಂದ ಹಲ್ಲೆ ಮಾಡಿದ್ದಲ್ಲದೇ, ತನ್ನ ಮೇಲೆ ಆ್ಯಸಿಡ್ ದಾಳಿಗೂ ಯತ್ನ ನಡೆಸಿದ್ದಾರೆ ಎಂದು ಬಾಲಿವುಡ್ ನಟಿ ಪಾಯಲ್ ಘೋಷ್ ಆರೋಪಿಸಿದ್ದಾರೆ.
ಇತ್ತೀಚೆಗೆ ಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಮೇಲೆ ಅತ್ಯಾಚಾರದ ಆರೋಪ ಮಾಡಿ ನಟಿ ಪಾಯಲ್ ಸುದ್ದಿಯಲ್ಲಿದ್ದರು.
ನಿನ್ನೆ ರಾತ್ರಿ 10 ಗಂಟೆ ವೇಳೆ ಪಾಯಲ್ ಘೋಷ್ ಔಷಧಿ ತೆಗೆದುಕೊಂಡು ಬರುವ ಉದ್ದೇಶದಿಂದ ಮನೆಯಿಂದ ಹೊರಗಡೆ ಬಂದಿದ್ದರು. ಈ ವೇಳೆ ಕೆಲವರು ನನ್ನ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದು, ಕೈಗೆ ಪೆಟ್ಟು ಬಿದ್ದಿದೆ. ಅವರು ಕೈಯಲ್ಲಿ ಬಾಟಲಿ ಹಿಡಿದುಕೊಂಡಿದ್ದರು. ಬಹುಶಃ ಅದು ಆ್ಯಸಿಡ್ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ನಟಿ ಪಾಯಲ್ ಘೋಷ್ ಮೂಲತಃ ಪಶ್ಚಿಮ ಬಂಗಾಳದವರಾಗಿದ್ದು, ತೆಲಗು, ಕನ್ನಡ ಹಾಗೂ ಹಿಂದಿಯ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.