ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ | ಐದು ದಿನ ವಾಸ್ತವ್ಯ

Prasthutha|

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಐದು ದಿನಗಳ ಕಾಲ ವಾಸ್ತವ್ಯ ಹೂಡಲಿರುವ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

- Advertisement -

ಸುಮಾರು ಒಂದುವರೆ ವರ್ಷಗಳ ನಂತರ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಪ್ರಧಾನಿ ಕ್ವಾಡ್ ಒಕ್ಕೂಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಬೈಡೆನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆಯಲ್ಲಿಯೂ ಭಾಗವಹಿಸಲಿದ್ದಾರೆ.

ಬೈಡೆನ್ ಪ್ರಧಾನಿಯ ನಂತರ ಮೊದಲ ಬಾರಿಗೆ ಅಮೆರಿಕಾ ಭೇಟಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕೋವಿಡ್ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯೊಂದಿಗೆ ವಿದೇಶಾಂಗ ಸಚಿವ ಜೈಶಂಕರ್, ಭಾರತದ ರಾಷ್ಡ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ತೆರಳಲಿದ್ದಾರೆ.



Join Whatsapp