ಕೊಪ್ಪಳ: ದಲಿತ ಬಾಲಕನೊಬ್ಬ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ದಂಡ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನಕಪ್ಪ ಪೂಜಾರಿ, ಹನಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ ಶರಣಗೌಡ, ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳದ ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದಲ್ಲಿ ಸೆ.4ರಂದು ಮೂರು ವರ್ಷದ ಪುಟ್ಟ ಬಾಲಕನ ಹುಟ್ಟುಹಬ್ಬವಿತ್ತು. ಈ ಹಿನ್ನೆಲೆ ಪೋಷಕರೊಂದಿಗೆ ಈತ ದೇವಸ್ಥಾನ ಪ್ರವೇಶ ಮಾಡಿದ್ದನು. ಇದನ್ನು ವಿರೋಧಿಸಿದ ಮಿಯಾಪುರ ಗ್ರಾಮದ ಸವರ್ಣಿಯರು ದಲಿತ ಬಾಲಕನ ಕುಟುಂಬಕ್ಕೆ 23 ಸಾವಿರ ರೂಪಾಯಿ ದಂಡವನ್ನು ವಿಧಿಸಿತ್ತು. ಇದರ ವಿರುದ್ಧ ಅನ್ಯಾಯಕ್ಕೆ ಒಳಗಾದ ಸಮುದಾಯ ಪ್ರತಿಭಟನೆಯನ್ನು ಮಾಡಿತ್ತು.