ಸಂಘಪರಿವಾರದಿಂದ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರ ಕೊಲೆಯತ್ನ ಪ್ರಕರಣ ಆರೋಪಿಗಳ ಬಂಧನಕ್ಕೆ SDPI ಆಗ್ರಹ

Prasthutha|

ಮಂಗಳೂರು : ಉಳಾಯಿಬೆಟ್ಟು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ತಾ.ಪಂ ಮಾಜಿ ಸದಸ್ಯ ಯೂಸುಫ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಪ್ರಕರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ.

- Advertisement -

ಜಿಲ್ಲೆಯ ಶಾಂತಿಯನ್ನು ಕೆದಡಲು ಸಂಘಪರಿವಾರದ ಗೂಂಡಾಗಳು ನಡೆಸಿದಂತಹ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ಘಟನೆ ನಡೆದು ಮೂರು ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸಲು ಪೋಲಿಸರಿಗೆ ಸಾಧ್ಯವಾಗದೇ ಇರುವುದು ವಿಪರ್ಯಾಸವಾಗಿದೆ. ಅತೀ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಬೇಕು ಮತ್ತು ಇಂತಹ ಕೃತ್ಯ ಮರುಕಳಿಸದಂತೆ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವನ್ನು ಜರಗಿಸಬೇಕು ಎಂದು ಎಸ್ ಡಿಪಿಐ ಒತ್ತಾಯಿಸುತ್ತಿದೆ.

ಸಂಘಪರಿವಾರದ ಸದಸ್ಯರು ಕಳೆದ ಎರಡು ತಿಂಗಳಿನಿಂದ ಜಿಲ್ಲೆಯ ಶಾಂತಿ ಕದಡಲು ನಿರಂತರವಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ದುಷ್ಕರ್ಮಿಗಳನ್ನು ತಡೆಯಬೇಕಾಗಿದೆ ಎಂದು ಎಸ್ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ನೌಶಾದ್ ಚೊಕ್ಕಬೆಟ್ಟು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp