ಪ.ಬಂಗಾಳ: ರೋಮ್ ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಯಾವುದೇ ಹಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ವಾಗ್ದಾಳಿ ನಡೆಸಿದ್ದಾರೆ. ಚುನಾವನೋತ್ತರ ಸಮಯದಲ್ಲಿ ಹಿಂಸಾಚಾರ ತಡೆಯದ ಮಮತಾಗೆ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸುವ ಹಕ್ಕಿಲ್ಲ ಎಂದಿದ್ದಾರೆ.
ಪಶ್ಚಿಮ ಬಂಗಾಳ ಚುನಾವನೋತ್ತರ ವೇಳೆ ಪುರ್ಬಾ ಮೇದಿನಿಪುರ, ಖೇಜುರಿ, ನಂದಿಗ್ರಾಮ ಜೆಲ್ಲೆ ಹಾಗೂ ರಾಜ್ಯದ ಇತರ ಜಿಲ್ಲೆಗಳು ಹೊತ್ತಿ ಉರಿದು ಹಿಂಸಾಚಾರ ಉಲ್ಭಣಗೊಂಡಾಗ ಮಮತಾ ಬ್ಯಾನರ್ಜಿಗೆ ಕ್ರಮ ಕೈಗೊಳ್ಳಲು ಸಾಧ್ಯವಾಗಲಿಲ್ಲ, ಆದ್ದರಿಂದ ನೀವು ಶಾಂತಿ ಸಭೆಯಲ್ಲಿ ಪಾಲ್ಗೊಳ್ಳಲು ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮ ಬಿಜೆಪಿ ಕಾರ್ಯಕರ್ತರ ಮೇಲಿನ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದಾಗ ನೀವು ಕುಮ್ಮಕ್ಕು ನೀಡಿದ್ದೀರಿ ಎಂದು ಆರೋಪಿಸಿದ್ದಾರೆ.
ಆದರೆ ನನಗೆ ರೋಮ್ ನಲ್ಲಿ ನಡೆಯುವ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರಕಾರ ಅನುಮತಿ ನಿರಾಕರಿಸಿದೆ ಎಂದು ಮಮತಾ ಇತ್ತೀಚೆಗಷ್ಟೆ ಆರೋಪಿಸಿದ್ದರು. ಒಂದು ರಾಜ್ಯದ ಮುಖ್ಯಮಂತ್ರಿಗೆ ಇದು ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.