ಭಾರತ್ ಬಂದ್| ಸಿಂಘು ಗಡಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ರೈತ ಸಾವು!

Prasthutha|

ಹೊಸದಿಲ್ಲಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಹರಿಯಾಣದ ಸಿಂಘು ಗಡಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ರೈತನೊಬ್ಬ ಮೃತಪಟ್ಟಿದ್ದಾನೆ.

- Advertisement -

ರೈತನು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತರ ಮುಷ್ಕರದಲ್ಲಿ ಈವರೆಗೆ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಪೊಲೀಸರು ಭಾರೀ ಭದ್ರತೆಯನ್ನು ಏರ್ಪಡಿಸಿದ್ದರು.

- Advertisement -

ದೆಹಲಿ-ಗುರು ಗ್ರಾಮ್ ಗಡಿಯಲ್ಲಿ ಒಂದೂವರೆ ಕಿ.ಮೀ.ಗೂ ಅಧಿಕ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.



Join Whatsapp