ಭವಾನಿಪುರ ಗಲಭೆ| ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದ ಚುನಾವಣಾ ಆಯೋಗ

Prasthutha|

ಕೋಲ್ಕತ್ತಾ: ಭಾವಾನಿಪುರ ಕ್ಷೇತ್ರದಲ್ಲಿ ನಡೆದ ಗಲಭೆಯ ಬಗ್ಗೆ ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದೆ.

- Advertisement -

ಪ್ರಚಾರದ ಸಮಯದಲ್ಲಿ ಪಕ್ಷದ ನಾಯಕ ದಿಲೀಪ್ ಘೋಷ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು BJP ಕಾರ್ಯಕರ್ತರು ಆರೋಪಿಸಿದ್ದರು.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋತ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪುನರಾಯ್ಕೆ ಬಯಸುತ್ತಿರುವ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ಭಾರೀ ಪ್ರಚಾರವನ್ನು ಯೋಜಿಸಿತ್ತು. ಈ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಬಿಜೆಪಿ ನಾಯಕ ದಿಲೀಪ್ ಘೋಷ್ ಮೆಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು.



Join Whatsapp