ಮಧ್ಯಪ್ರದೇಶ: ‘ಆರ್ಥಿಕ ಜಿಹಾದ್’ ಆರೋಪದಲ್ಲಿ ಮುಸ್ಲಿಮ್ ವ್ಯಾಪಾರಿಗಳ ಮೇಲೆ ದಾಳಿ ನಡೆಸಿದ ಹಿಂದುತ್ವವಾದಿಗಳು!

Prasthutha|

ಹೊಸದಿಲ್ಲಿ: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಮುಸ್ಲಿಮ್ ವ್ಯಾಪಾರ ಸಂಸ್ಥೆಗಳನ್ನು ಮುಚ್ಚುವಂತೆ ಒತ್ತಾಯಿಸಿ ಸಂಘ ಪರಿವಾರದ ಕಾರ್ಯಕರ್ತರು ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಮುಸ್ಲಿಮರು ‘ಆರ್ಥಿಕ ಜಿಹಾದ್’ ಮೂಲಕ ಹಿಂದೂಗಳ ವ್ಯಾಪಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ನಗರದಲ್ಲೆಡೆ ಕೋಮು ದ್ವೇಷದ ಘೋಷಣೆಗಳನ್ನು ಕೂಗುತ್ತಾ ಶಸ್ತ್ರಾಸ್ತ್ರಗಳೊಂದಿಗೆ ಆಗಮಿಸಿದ ಸಂಘಪರಿವಾರದ ಕಾರ್ಯಕರ್ತರು ದಾರಿಯುದ್ದಕ್ಕೂ ಮುಸ್ಲಿಮರ ಅಂಗಡಿಗಳು ಮತ್ತು ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ.

ಹಲವು ಅಂಗಡಿಗಳಿಗೆ ಸಂಪುರ್ಣ ಹಾನಿಯಾಗಿದ್ದು, ಅಂಗಡಿ ಮಾಲಿಕರು ಮತ್ತು ದಾರಿಹೋಕರ ಮೇಲೆ ಹಲ್ಲೆ ನಡೆಸಲಾಗಿದೆ.

- Advertisement -

 ಹಿಂದೂ ಬಾಹುಳ್ಯವುಳ್ಳ ಪ್ರದೇಶಗಳಲ್ಲಿ ಮುಸ್ಲಿಮರು ‘ಆರ್ಥಿಕ ಜಿಹಾದ್’ ಮಾಡುತ್ತಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ಹಿಂದುತ್ವವಾದಿಗಳು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ವರದಿಯಾಗಿದೆ.



Join Whatsapp