ರೇಣುಕಾಚಾರ್ಯ ಸೇರಿ ಇಬ್ಬರನ್ನು ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಿಸಿ ರಾಜ್ಯ ಸರಕಾರ ಆದೇಶ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ, ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

- Advertisement -

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜಕೀಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದ ಇವರನ್ನು ಇದೀಗ ಬೊಮ್ಮಾಯಿ ಅವಧಿಗೂ ನೇಮಿಸಿ ಆದೇಶ ಜಾರಿಗೊಳಿಸಿದೆ, ಅಲ್ಲದೇ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ಮತ್ತು ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ.



Join Whatsapp