ವಿಶ್ವ ಹಿರಿಯ ನಾಗರಿಕರ ದಿನದಂದು ಸಾಧಕರಿಗೆ ಸನ್ಮಾನ: ಸಚಿವ ಹಾಲಪ್ಪ ಆಚಾರ್

Prasthutha|

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಗುರುಪಾದಪ್ಪ ಅಂಚೇರ, ಸಾಹಿತ್ಯ ಡಾ. ಕರಿವೀರಪ್ರಭು, ಕಲಾಶರಣಪ್ಪ ಗೋನಾಳ, ಸಮಾಜಸೇವೆ ಜನಾರ್ದನ, ಕ್ರೀಡಾ ಅಂಚೆ ಅಶ್ವತ್ಥ್, ಕಾನೂನು ಕಿಶನ್ ರಾವ್, ಅವರುಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೋವಿಡ್ನಿಂದ ಮೃತಪಟ್ಟ ಮಕ್ಕಳಿಗೆ ಇಲಾಖೆ ವತಿಯಿಂದ ಆರ್ಥಿಕ ಸಹಾಯ ನೀಡಲಾಗಿದ್ದು, ಚೈಲ್ಡ್ ಕೇರ್ ಸೆಂಟರ್ನಲ್ಲಿ ಅವರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.


ರಾಜ್ಯದಲ್ಲಿ ಹತ್ತು ದಶಲಕ್ಷ ಟನ್ ಮರಳಿನ ಕೊರತೆ ಇದೆ. ಈ ಸಮಸ್ಯೆಯನ್ನು ನಿವಾರಿಸಲು ಹೊಸ ಮರಳು ನೀತಿ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆಯಬೇಕಿದೆ ಎಂದು ಸಚಿವರು ಹೇಳಿದರು.

- Advertisement -


ಕೇಂದ್ರ ಸರ್ಕಾರ ಒಂಭತ್ತು ಬಾಕ್ಸ್ ಚಿನ್ನದ ನಿಕ್ಷೇಪ ತೆಗೆಯಲು ಸ್ಥಳ ಗುರುತಿಸಿ, ರಾಜ್ಯಕ್ಕೆ ಅನುಮೋದನೆ ನೀಡಿದ್ದಾರೆ. ಹರಾಜು ಪ್ರಕ್ರಿಯೆ ಮೂಲಕ ಚಿನ್ನದ ನಿಕ್ಷೇಪ ತೆಗೆಯಲು ಅವಕಾಶ ಮಾಡಿಕೊಡಲಾಗುವುದು. ಇದರಿಂದ ಸರ್ಕಾರಕ್ಕೆ ದೊಡ್ಡ ಮಟ್ಟದ ಆದಾಯ ಬರಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರೂ ಆಗಿರುವ ಹಾಲಪ್ಪ ಆಚಾರ್ ಹೇಳಿದರು.

Join Whatsapp