ದಸರಾದ ಬಳಿಕ 1-5 ನೇ ತರಗತಿ ಪ್ರಾರಂಭ: ಡಾ.ಸುಧಾಕರ್

Prasthutha|

ನವದೆಹಲಿ: ದಸರಾ ಬಳಿಕ ಸಭೆ ನಡೆಸಿ 1-5 ತರಗತಿಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಿಗಬಹುದು. ಈ ಕುರಿತು ಭಾರತ್ ಬಯೋಟೆಕ್ ಮತ್ತು ಝೈಡಸ್ ಕ್ಯಾಡಿಲಾ ಲಸಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಝೈಡಸ್ ವ್ಯಾಕ್ಸಿನ್ ಬೆಲೆ ನಿರ್ಣಯ ಮಾಡಬೇಕಿದೆ. ನವೆಂಬರ್ ವೇಳೆಗೆ ಭಾರತ್ ಬಯೋಟೆಕ್ ಈ ಲಸಿಕೆಗೆ ಅನುಮತಿ ಸಿಗಬಹುದು. ಮೂಗಿನ ಮೂಲಕ ಪಡೆಯುವ ವ್ಯಾಕ್ಸಿನ್ ಬಗ್ಗೆ ಸಹ ಚರ್ಚೆ ನಡೆದಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು.


ಸಿರೋ ಸಮೀಕ್ಷೆಯಲ್ಲಿ ರಾಜ್ಯದ ಜನರಲ್ಲಿ ಶೇ.60ರಷ್ಟು ರೋಗ ನಿರೋಧಕ ಶಕ್ತಿ ಇದೆ. ಕೆಲವು ಕಡೆ ಶೇ.70ಕ್ಕೂ ಅಧಿಕ ಇದೆ. ನವೆಂಬರ್ ಡಿಸೆಂಬರ್ ವರೆಗೂ ಕಾದು ನೋಡಬೇಕು. ಕೊರೋನಾ ರೂಪಾಂತರದ ಬಗ್ಗೆ ಯೋಚನೆ ಮಾಡಬೇಕು. ಹೊಸ ರೂಪಾಂತರಿ ಬಗ್ಗೆ ಈಗಲೇ ಹೇಳುವುದು ಕಷ್ಟ ಎಂದರು.

- Advertisement -


ಸಾಂಕ್ರಾಮಿಕ ರೋಗ ಗೆಲ್ಲಬೇಕು ಎಂದರೆ ಒಂದು ರಾಜ್ಯ, ದೇಶದಲ್ಲಿ ಕೈಯಲ್ಲಿ ಇಲ್ಲ. ಇಡೀ ಪ್ರಪಂಚದಲ್ಲಿ ನಿಯಂತ್ರಣ ಮಾಡಬೇಕು. ಭಾರತದಲ್ಲಿ ಎಲ್ಲರಿಗೂ ಲಸಿಕೆ ನೀಡದ ಹೊರತು ಕೋವಿಡ್ ನಿಯಂತ್ರಣಕ್ಕೆ ಬರುತ್ತೆ ಎಂಬುದು ಗ್ಯಾರಂಟಿ ಇಲ್ಲ. ಎಲ್ಲ ಕಡೆಯೂ ಕೊರೋನಾ ನಿಯಂತ್ರಣಕ್ಕೆ ಬರಬೇಕಿದೆ ಎಂದರು.



Join Whatsapp