ಲಖ್ನೊ: ಮೋದಿ ಅವರನ್ನುದ್ದೇಶಿಸಿ ಟ್ವೀಟ್ ಮಾಡಿ, ತಮ್ಮ ಸರ್ಕಾರ ಯಾವುದೇ ಆದೇಶ ಅಥವಾ FIR ಇಲ್ಲದೆ ಕಳೆದ 28 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟಿದೆ ಎಂದು ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ.
ಲಖಿಂಪುರ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬದ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನಿನ್ನೆಯಿಂದ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಬಂಧನ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ.