ಬೆಂಗಳೂರು: ರಾಜ್ಯ ಸರ್ಕಾರವು ದಸರಾ ರಜೆ ಬಳಿಕ ಕಿರಿಯ ಪ್ರಾಥಮಿಕ ಶಾಲೆ ಆರಂಭಕ್ಕೆ ಚಿಂತನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದಿನ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಆದರೆ ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆಯ ನಡೆಗೆ ಬೆಂಗಳೂರು ಸಿಟಿಜನ್ ರೈಟ್ಸ್ ಫೌಂಡೇಶನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನೂ ದೂರವಾಗಿಲ್ಲ. ಈ ವೇಳೆ ಶಾಲೆ ಆರಂಭಿಸುವುದು ಸರಿಯಲ್ಲ.
ಅಲ್ಲದೆ ಮಕ್ಕಳಿಗೆ ಕೊರೊನಾ ಲಸಿಕೆ ಇನ್ನೂ ಬಂದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಸರಿಯಲ್ಲ ಎಂದು ಸಿಎಂ ಬೊಮ್ಮಾಯಿ, ಬಿ.ಸಿ.ನಾಗೇಶ್, ಡಾ.ಕೆ.ಸುಧಾಕರ್ ಗೆ ಪತ್ರ ಬರೆದಿದ್ದು, ಸರ್ಕಾರ ತಪ್ಪು ಹೆಜ್ಜೆ ಇಟ್ಟರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.