LPG ಸಿಲಿಂಡರ್ ದರ 15 ರೂ ಏರಿಕೆ !

Prasthutha|

ರಾಜ್ಯದ ಜನರಿಗೆ ಬೆಳ್ಳಂಬೆಳಗ್ಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಲಾಗಿದ್ದು, LPG ಸಿಲಿಂಡರ್ ದರದಲ್ಲಿ 15 ರೂ ಹೆಚ್ಚಳಗೊಳಿಸಲಾಗಿದೆ. ಇದರೊಂದಿಗೆ 14.5 ಕೆಜಿಯ ಗೃಹ ಬಳಕೆಯ ಸಿಲಿಂಡರ್ ದರ ಒಟ್ಟು 899 ರೂ.ಗೆ ಏರಿಕೆ ಕಂಡಿದೆ. ಬೆಲೆ ಏರಿಕೆಯು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರ ಎಳೆದಂತಾಗಿದೆ.

- Advertisement -

  ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್ ದರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿಗೆ 899 ರೂಪಾಯಿ 50 ಪೈಸೆಯಾಗಿದೆ. 5 ಕೆಜಿ ಸಿಲಿಂಡರ್ ಬೆಲೆ 502 ರೂಪಾಯಿಯಾಗಿದೆ. 

ಕಳೆದ ಅಕ್ಟೋಬರ್ 1ರಂದು ಪೆಟ್ರೋಲಿಯಂ ಕಂಪೆನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 43 ರೂಪಾಯಿ 5 ಪೈಸೆಯಷ್ಟು ಹೆಚ್ಚಳ ಮಾಡಿದ್ದವು. ಇದೀಗ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಶಾಕ್ ನೀಡಿದೆ.

- Advertisement -


Join Whatsapp