ಕೋಲ್ಕತ್ತಾ: ತ್ರಿಪುರಾದಲ್ಲಿ ಬಿಜೆಪಿ ಸರ್ಕಾರದ ದುಷ್ಕೃತ್ಯಗಳಿಗಾಗಿ ತಲೆ ಬೋಳಿಸುವ ಮೂಲಕ ಸುರ್ಮಾ ಬಿಜೆಪಿ ಶಾಸಕ ಆಶಿಶ್ ದಾಸ್ ಪಕ್ಷ ತೊರೆದಿದ್ದಾರೆ.
ಅವರು ಕೋಲ್ಕತ್ತಾದ ಪ್ರಸಿದ್ಧ ಕಾಳಿಘಾಟ್ ದೇವಸ್ಥಾನದಲ್ಲಿ ಒಂದು ಯಜ್ಞವನ್ನೂ ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್ ಸೇರುವ ವದಂತಿಗಳ ನಡುವೆ ಅವರು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಇರುವ ದೇವಸ್ಥಾನಕ್ಕೆ ಭೇಟಿ ನೀಡಿ ಯಜ್ಞ ನಡೆಸಿದ್ದಾರೆ.
ತ್ರಿಪುರಾದಲ್ಲಿ ಬಿಜೆಪಿ ರಾಜಕೀಯ ಅವ್ಯವಸ್ಥೆ ಮತ್ತು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿಯಿಂದ ಜನರು ಅತೃಪ್ತರಾಗಿರುವುದರಿಂದ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಈ ನಡುವೆ ದಾಸ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮಮತಾ ಬ್ಯಾನರ್ಜಿಯನ್ನು ಪ್ರಶಂಸಿದ್ದ ದಾಸ್, ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇಬ್ ಅವರನ್ನು ತೀವ್ರವಾಗಿ ಟೀಕಿಸಿದ್ದರು.