ಮಧ್ಯಪ್ರದೇಶದಲ್ಲಿ ಮುಸ್ಲಿಮ್ ರೋಗಿಗೆ ಚಿಕಿತ್ಸೆ ನಿರಾಕರಿಸಿ ಹಲ್ಲೆ ನಡೆಸಿದ ವೈದ್ಯರ ಅಮಾನತು

Prasthutha|

ಭೋಪಾಲ್: ಮಧ್ಯಪ್ರದೇಶದ ಬೇತುಲ್ ನ ಜಿಲ್ಲಾ ಆಸ್ಪತ್ರೆಯಲ್ಲಿ ಮುಸ್ಲಿಮ್ ಮಹಿಳಾ ರೋಗಿಯೊಬ್ಬರಿಗೆ ಚಿಕಿತ್ಸೆ ನಿರಾಕರಿಸಿ, ಆಕೆಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

- Advertisement -

ರೆಹನಾ ಪರ್ವೀನ್ ಎಂಬಾಕೆಗೆ ಮುಸ್ಲಿಮ್ ಎಂಬ ನೆಲೆಯಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ಪ್ರದೀಪ್ ಧಕಾಡ್ ಎಂಬವರ ವಿರುದ್ಧ ದೂರು ದಾಖಲಿಸಲಾಗಿತ್ತು.

ತೀವ್ರ ರೀತಿಯ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನನ್ನನ್ನು ಆಸ್ಪತ್ರೆಗೆ ದಾಖಲಿಸಲು ಡಾ. ಪ್ರದೀಪ್ ಧಕಾಡ್ ನಿರಾಕರಿಸಿ ಹಲ್ಲೆ ನಡೆಸಿದ್ದರು ಸಂತ್ರಸ್ತೆ ದೂರಿದ್ದರು.

- Advertisement -

ಘಟನೆಯನ್ನು ವಿರೋಧಿಸಿ ಆಸ್ಪತ್ರೆಯ ಮುಂಭಾಗದಲ್ಲಿ ಭೀಮ್ ಸೇನಾ ಸಂಘಟನೆ ಪಂಕಜ್ ಅತುಲ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತ್ತು.

ಈ ಸಂಬಂಧ ಡಾ. ಪ್ರದೀಪ್ ಧಕಾಡ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಮಾತ್ರವಲ್ಲ ಆತನ ವಿರುದ್ಧ ಐಪಿಸಿ ಸೆಕ್ಷನ್ 323, 294, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ವರಿಷ್ಠಾಧಿಕಾರಿ ಸಿಮಲಾ ಪ್ರಸಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.



Join Whatsapp