ಮಂಗಳೂರು: ಕೇಂದ್ರ ಸರಕಾರದ ನೆಹರೂ ಯುವಜನ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಕ್ಲೀನ್ ಇಂಡಿಯಾ ಕಾರ್ಯ ಕ್ರಮದ ಅಂಗವಾಗಿ ರವಿವಾರ ಮಂಗಳೂರು ಪತ್ರಿಕಾ ಭವನ ಸುತ್ತ ಮುತ್ತಲ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರೂ ಯುವ ಕೇಂದ್ರ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಭಾಗವಹಿಸಿ ಮಾತನಾಡಿ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಜಿಲ್ಲೆಯ ವಿವಿಧ ಕಡೆ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ,ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದೆ.ಗ್ರಾಮೀಣ ಭಾಗದಲ್ಲೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ,ಸಾರ್ವಜನಿಕರು ಈ ಜಾಗೃತಿ ಕಾರ್ಯಕ್ರಮದಲ್ಲಿ ಕೈ ಜೋಡಿಸಿದ್ದಾರೆ.ಈ ದಿನ ನೆಹರು ಯುವ ಕೇಂದ್ರದ ಸಹಕಾರದೊಂದಿಗೆ ಪತ್ರಿಕಾ ಭವನದ ವಠಾರದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಹಕಾರ ನೀಡಿ ಪಾಲ್ಗೊಂಡ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು,ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾಧಿಕಾರಿ ರಘುವೀರ್ ಸೂಟರ್ ಪೇಟೆ, ಸಾಮಾಜಿಕ ಕಾರ್ಯಕರ್ತ ಜೀತ್ ಮಿಲನ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಆರಿಫ್ ಪಡುಬಿದ್ರೆ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್,ದ.ಕ ಜಿಲ್ಲಾಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ನಿರ್ದೇಶಕ ಸುಖ್ ಪಾಲ್ ಪೊಳಲಿ, ಪತ್ರಕರ್ತರಾದ ರಾಘವ,ರಾಜೇಶ್ ಮೊದಲಾದ ವರು ಭಾಗವಹಿಸಿದ್ದರು.