ರಾಹುಲ್ ಗಾಂಧಿ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷರಾಗಲಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಗತಿಗೆ ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರಾಗುವುದು ಅಗತ್ಯ ಹಾಗೂ ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಈ ವಿಚಾರವನ್ನು ನಾನು ಹಿಂದೆಯೂ ಪ್ರಸ್ತಾಪಿಸಿದ್ದೆ, ಈಗಲೂ ಪ್ರತಿಪಾದಿಸುತ್ತೇನೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರ ಒಮ್ಮತದ ನಿಲುವು ಸಹ ಇದೇ ಆಗಿದೆ ಎಂದು ಹೇಳಿದ್ಧಾರೆ.

ಬೆಂಗಳೂರಿನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಪ್ರಗತಿಗೆ ರಾಹುಲ್ ಗಾಂಧಿ ರಾಷ್ಟ್ರೀಯ ಅಧ್ಯಕ್ಷರಾಗುವುದೇ ಸೂಕ್ತ ಎಂದು ತಿಳಿಸಿದ್ದಾರೆ.



Join Whatsapp