ಡಿಕೆಶಿ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ಸಲೀಂ ಅಮಾನತು!

Prasthutha|

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ.



Join Whatsapp