ಮಂಗಳೂರು: ‘ಮಂಗಳೂರು ದಸರಾ’ ಕಣ್ತುಂಬಿಕೊಂಡ ಸಿಎಂ ಬೊಮ್ಮಾಯಿ

Prasthutha|

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವವಿಖ್ಯಾತ ಮಂಗಳೂರು ದಸರಾವನ್ನು ಇಂದು ಕಣ್ತುಂಬಿಕೊಂಡರು. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಹಬ್ಬವನ್ನು ವೀಕ್ಷಿಸುವ ಉದ್ದೇಶದಿಂದ ದೇವಾಲಯಕ್ಕೆ ಭೇಟಿ ನೀಡಿದರು.

- Advertisement -

 ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ದೇವಾಲಯದ ಪ್ರಮುಖರಾದ ಎಚ್.ಎಸ್. ಸಾಯಿರಾಂ, ಪದ್ಮರಾಜ್ ಮತ್ತಿತ್ತರರು ಉಪಸ್ಥಿತರಿದ್ದರು.

ಸಿಎಂ ಭೇಟಿ ಹಿನ್ನೆಲೆ ಭಕ್ತಾದಿಗಳಿಗೆ ಮಧ್ಯಾಹ್ನ 3 ಗಂಟೆಯಿಂದ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ದೇವಸ್ಥಾನದ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.



Join Whatsapp