ಮೂವರು ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತ

Prasthutha|

ಕಲ್ಲಿಕೋಟೆ: ಕಾಲುವೆಯಲ್ಲಿ ಮುಳುಗುತ್ತಿದ್ದ ಮೂವರು ಮಕ್ಕಳನ್ನು ರಕ್ಷಿಸಿದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಕೇರಳದ ಕುಟ್ಟಿಯಾಡಿ ಪ್ರದೇಶದ ವಿಲಾಪಳ್ಳಿ ಅರಯಾಕೂಲ್ ನಲ್ಲಿ ನಡೆದಿದೆ.

- Advertisement -

ಮೃತರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಾರ್ಯಕರ್ತ ಝಹೀರ್(40) ಎಂದು ಗುರುತಿಸಲಾಗಿದೆ. ಮಾಹಿ ಕಾಲುವೆಯಲ್ಲಿ ಮುಳುಗುತ್ತಿದ್ದ ಮೂವರು ಮಕ್ಕಳನ್ನು ರಕ್ಷಿಸಿದ ಬಳಿಕ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.

ಮಾಹಿ ಕಾಲುವೆಯಲ್ಲಿ ಸ್ನಾನ ಮಾಡಲು ಬಂದ ಮೂವರು ಮಕ್ಕಳು ನೀರಿನ ಸುಳಿಯಲ್ಲಿ ಸಿಲುಕಿದ್ದರು. ಜೊತೆಗಿದ್ದವರ ಕಿರುಚಾಟ ಕೇಳಿ ಝಹೀರ್ ಸ್ಥಳಕ್ಕೆ ಓಡಿ ಬಂದಿದ್ದಾರೆ. ತಕ್ಷಣ ಕಾಲುವೆಗೆ ಹಾರಿದ ಝಹೀರ್ ಮೂವರು ಮಕ್ಕಳನ್ನು ದಡಕ್ಕೆ ಕರೆತಂದಿದ್ದಾರೆ. ಆದರೆ ಇದಾದ ಬಳಿಕ ನಿಯಂತ್ರಣ ತಪ್ಪಿದ ಅವರು ನೀರಿನಲ್ಲಿ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದಾರೆ.

- Advertisement -

ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬಂದರೂ ಝಹೀರ್‌ನನ್ನು ಉಳಿಸಲು ಸಾಧ್ಯವಾಗಲಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮತ್ತು ಸ್ಥಳೀಯರ ಒಂದೂವರೆ ಗಂಟೆ ಸುದೀರ್ಘ ಹುಡುಕಾಟದ ನಂತರ ಝಹೀರ್ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಟ್ವೀಟ್ ಮಾಡಿದ ಪಾಪ್ಯುಲರ್ ಫ್ರಂಟ್ ಚೇರ್ಮೆನ್ OMA ಸಲಾಂ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತ ಝಹೀರ್ ಅವರು ಮೂವರು ಮಕ್ಕಳನ್ನು ರಕ್ಷಿಸಿ ತನ್ನ ಪ್ರಾಣವನ್ನು ಅರ್ಪಿಸಿದ್ದಾರೆ. ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಈ ಮಹತ್ಕಾರ್ಯವನ್ನು ಭಗವಂತ ಸ್ವೀಕರಿಸಲಿ. ಅವರಿಗೆ ಸ್ವರ್ಗದ ಪ್ರತಿಫಲ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.



Join Whatsapp