ಜೋಧ್ ಪುರ: ಟಿ -20 ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಾಟವನ್ನು ಮರುಪರಿಶೀಲನೆ ನಡೆಸಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಪ್ರಸಕ್ತ ಭಾರತ – ಪಾಕಿಸ್ತಾನಗಳ ನಡುವಿನ ರಾಜತಾಂತ್ರಿಕ ಸಂಬಂಧ ಉತ್ತಮವಾಗಿರದ ಕಾರಣ ಈ ಪಂದ್ಯಾಟವನ್ನು ಮರುಪರಿಶೀಲನೆ ನಡೆಸಬೇಕಾಗಿದೆ ಎಂದು ಮಾಧ್ಯಮದೊಂದಿಗೆ ಮಾತನಾಡುತ್ತ ಪ್ರತಿಕ್ರಿಯಿಸಿದರು.
ಮುಂಬರುವ ಟಿ 20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡದ ನಡುವೆ ಬಹು ನಿರೀಕ್ಷಿತ ಹೈ ವೊಲ್ಟೇಜ್ ಪಂದ್ಯ ಅಕ್ಟೋಬರ್ 24 ರಂದು ದುಬೈನಲ್ಲಿ ನಡೆಯಲಿದೆ.
ಕಳೆದ ಕೆಲವು ದಿನಗಳಿಂದ ಜಮ್ಮು, ಕಾಶ್ಮೀರದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಮತ್ತು ಹತ್ಯೆಯ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ರಾಜತಾಂತ್ರಿಕ ಸಂಬಂಧದಲ್ಲಿ ಸಮಸ್ಯೆ ಉಂಟಾಗಿದೆ ಎಂದು ಗಿರಿರಾಜ್ ಸಿಂಗ್ ಆರೋಪಿಸಿದರು.