‘ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ’ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್

Prasthutha|

ಛತ್ತೀಸ್ ಗಡ: ಭಾರತದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಛತ್ತೀಸ್ ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಿಳಿಸಿದ್ದಾರೆ. ಪ್ರಸಕ್ತ ಭಾರತದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಜೆಜೆಪಿಯನ್ನು ದೂರುವಿರಿಸುವ ಸನ್ನಿವೇಶ ಸನ್ನಿಹಿತವಾಗಿದೆ ಎಂಬುದ್ದನ್ನು ಸೂಚಿಸುತ್ತದೆ ಅವರು ಹೇಳಿದರು.

- Advertisement -

ಪ್ರಸಕ್ತ ಭಾರತದ ರಾಜಸ್ಥಾನ, ಛತ್ತೀಸ್ ಗಡ, ಮಧ್ಯಪ್ರದೇಶ ಮತ್ತು ಪಂಜಾಬ್ ನಲ್ಲಿ ಅಧಿಕಾರವನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಮಾತ್ರವಲ್ಲ ಮುಂದೆ ಉತ್ತರಪ್ರದೇಶ ಸೇರಿದಂತೆ ಅನೇಕ ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರುವ ಯೋಜನೆ ರೂಪಿಸಿದೆ ಎಂದು ಅವರು ತಿಳಿಸಿದರು.

2013 ರಲ್ಲಿ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಉನ್ನತ ನಾಯಕರೊಬ್ಬರು ನಕ್ಸಲರಿಂದ ಹತ್ಯೆಯಾದ ನಂತರ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ಕೀರ್ತಿ ಭೂಪೇಶ್ ಬಘೇಲ್ ಅವರಿಗೆ ಸಲ್ಲುತ್ತದೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಪ 15 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸುವಲ್ಲಿ ಯಶಸ್ವಿಯಾದರು.

- Advertisement -

ಪ್ರಸಕ್ತ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿಗೆ ನೆರವು ಒದಗಿಸಲು ಕಾಂಗ್ರೆಸ್ ಅನುಭವ ರಾಜಕಾರಣಿಯಾದ ಬಘೇಲ್ ಅವರನ್ನು ಅಲ್ಲಿನ ಚುನಾವಣಾ ವೀಕ್ಷಕರನ್ನಾಗಿ ಆಯ್ಕೆ ಮಾಡಿದೆ. ಮುಂದಿನ ವರ್ಷ ನಡೆಯುವ ಉತ್ತರಪ್ರದೇಶದ ಚುನಾವಣೆಯು ಪ್ರಿಯಾಂಕ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಎದುರಿಸುತ್ತದೆ.

ಪ್ರಿಯಾಂಕ ಗಾಂಧಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ, ಉತ್ತರಪ್ರದೇಶದ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಕಾಂಗ್ರೆಸ್ಸಿನ ಬಲ ವೃದ್ಧಿಸಿದೆ. ಕಾರ್ಯಕರ್ತರು ತುಂಬಾ ಉತ್ಸುಕವಾಗಿದ್ದಾರೆ ಎಂದು ಬಘೇಲ್ ತಿಳಿಸಿದರು.



Join Whatsapp