ಬಾಲಕಿಯರಿಗೆ ಸ್ಮಾರ್ಟ್ ಫೋನ್, ಸ್ಕೂಟರ್ ಭರವಸೆ: ಮಹಿಳಾ ಮತದಾರರ ಓಲೈಕೆಗೆ ಮುಂದಾದ ಪ್ರಿಯಾಂಕಾ ಗಾಂಧಿ

Prasthutha|

ಲಕ್ನೋ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಬಾಲಕಿಯರಿಗೆ ಸ್ಮಾರ್ಟ್ ಫೋನ್ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದಾರೆ.

- Advertisement -

ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ ಅವರು ಟ್ವಿಟ್ಟರ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ಪ್ರಿಯಾಂಕಾ ಅವರು ಮುಂಬರು ಅಸೆಂಬ್ಲಿ ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಶೇಕಡಾ 40 ರಷ್ಟು ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಿದೆ ಎಂದು ತಿಳಿಸಿದ್ದರು.

ಮುಂಬರುವ ಚುನಾವಣೆಯಲ್ಲಿ ಪ್ರಣಾಳಿಕೆ ಮತ್ತು ಕಾರ್ಯತಂತ್ರದ ಕುರಿತು ಚರ್ಚಿಸಲು ಪಕ್ಷದ ರಾಜ್ಯ ಘಟಕದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಪ್ರಿಯಾಂಕಾ ಗಾಂಧಿ ವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

- Advertisement -

ಮಂಗಳವಾರ ರಾತ್ರಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಪ್ರಿಯಾಂಕಾ ಬುಧವಾರ ತಡರಾತ್ರಿ ಆಗ್ರಾಕ್ಕೆ ಧಾವಿಸಿದ್ದರು



Join Whatsapp