SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಮಾವೇಶಕ್ಕೆ ಚಾಲನೆ; ರಾಷ್ಟ್ರೀಯ, ರಾಜ್ಯ ನಾಯಕರು ಭಾಗಿ

Prasthutha|

ಮಂಗಳೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -SDPI ದಕ್ಷಿಣ ಕನ್ನಡ ಜಿಲ್ಲಾ ಪ್ರತಿನಿಧಿಗಳ ಸಮಾವೇಶಕ್ಕೆ ಬಂಟ್ವಾಳ ತಾಲೂಕಿನ ಸಾಗರ್ ಅಡಿಟೋರಿಯಂ ನಲ್ಲಿ ಶುಕ್ರವಾರ ಚಾಲನೆ ದೊರೆತಿದ್ದು, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ದಂಡೇ ಆಗಮಿಸಿದೆ.

- Advertisement -


2018-21 ರ ಅವಧಿಯ ಕೊನೆಯ ಸಮಾವೇಶವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲ್, ಇಕ್ಬಾಲ್ ಬೆಳ್ಳಾರೆ, ಅಬ್ದುಲ್ ಜಲೀಲ್ ಕೃಷ್ಣಾಪುರ, ಮುಖಂಡರಾದ ಇಕ್ಬಾಲ್ ಐಎಂಆರ್, ಅಕ್ಬರ್ ಬೆಳ್ತಂಗಡಿ ಮತ್ತಿತರರು ಪಾಲ್ಗೊಂಡಿದ್ದಾರೆ.

- Advertisement -


ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಯುವ ಈ ಸಭೆಯಲ್ಲಿ ಮುಂದಿನ (2021-24) ಅವಧಿಗೆ ಹೊಸ ಜಿಲ್ಲಾ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಯ ಆಯ್ಕೆ ಅಂತರಿಕ ಚುನಾವಣೆ ಮೂಲಕ ನಡೆಯಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮಾಹಿತಿ ನೀಡಿದ್ದಾರೆ.



Join Whatsapp