ಮಾಸ್ಕೋ: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ವಿದೇಶಗಳಲ್ಲಿ ಕೊರೋನಾ ಅಟ್ಟಹಾಸಗೈಯುತ್ತಿದೆ. ಚೀನಾದಲ್ಲಿ ಮತ್ತೆ ಲಾಕ್ ಡೌನ್ ಮಾಡಲಾಗುತ್ತಿದೆ.
ಈ ಮಧ್ಯೆ ರಷ್ಯಾದಲ್ಲಿ ಒಂದೇ ದಿನ ಕೊವಿಡ್-19 ಮಹಾಮಾರಿಗೆ 1,000ಕ್ಕಿಂತ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹಿಂದೆ ಬಿದ್ದಿರುವ ಯುರೋಪ್ ರಾಷ್ಟ್ರಗಳಲ್ಲಿ ಹೊಸ ಪ್ರಕರಣಗಳು ಏರಿಕೆಯಾಗುತ್ತಿದೆ.
ಜೊತೆಗೆ ಸಾವಿನ ಸಂಖ್ಯೆಯು ಆಘಾತಕಾರಿಯಾಗಿದೆ. ರಷ್ಯಾದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 1075 ಮಂದಿ ಮೃತಪಟ್ಟಿದ್ದು, ಹೊಸ ದಾಖಲೆಯಾಗಿದೆ.