ಲಖ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರವಸೆಗಳ ಸುರಿಮಳೆಯನ್ನೇ ಸುರಿಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಜನರಿಗೆ 10ಲಕ್ಷ ರೂ. ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ಆರೋಗ್ಯ ಸೇವೆಯನ್ನು ನೀಡುವುದಾಗಿ ಉತ್ತರ ಪ್ರದೇಶದ ಉಸ್ತುವಾರಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
“ಕೋವಿಡ್ 19 ಸಮಯದಲ್ಲಿ ಉತ್ತರಪ್ರದೇಶದ ಆರೋಗ್ಯ ವ್ಯವಸ್ಥೆ ಕ್ಷೀಣಿಸಿರುವುದು ಎಲ್ಲರಿಗೂ ತಿಳಿದಿದೆ. ಪ್ರಸ್ತುತ ಸರ್ಕಾರದ ಉದಾಸೀನತೆ ಮತ್ತು ನಿರ್ಲಕ್ಷ್ಯವಾಗಿದೆ ಇದಕ್ಕೆಲ್ಲಾ ಮುಖ್ಯ ಕಾರಣ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಜತೆಗೆ 10 ಲಕ್ಷದವರೆಗಿನ ವೆಚ್ಚವನ್ನು ಸರಕಾರವೇ ಭರಿಸಲಿದೆ” ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.