ಹೊಸದಿಲ್ಲಿ: ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ವಾದ ಶುದ್ಧ ಸುಳ್ಳು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ನಾಸಿಕ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂಬುದು ಶುದ್ಧ ಸುಳ್ಳು. ಇದನ್ನು ಎಣಿಸಿ ನೋಡಿದವರು ಯಾರು? ಅರ್ಹ ನಾಗರಿಕರಿಗೆ ಇನ್ನೂ 23 ಕೋಟಿಗೂ ಹೆಚ್ಚು ಡೋಸ್‌ಗಳನ್ನು ನೀಡಿಲ್ಲ. ಎಷ್ಟು ದಿನ ನೀವು ಸುಳ್ಳು ಹೇಳಿ ನಡೆಯುತ್ತೀರಿ ಎಂದು ಅವರು ಪ್ರಶ್ನಿಸಿದ್ದಾರೆ.
ಅಕ್ಟೋಬರ್ 21 ರಂದು,ಪ್ರಧಾನಿ ಮೋದಿ ಅವರು ಭಾರತವು ನೂರು ಕೋಟಿ ಡೋಸ್ ಲಸಿಕೆಗಳನ್ನು ಪೂರ್ಣಗೊಳಿಸಿದೆ ಎಂದು ಘೋಷಿಸಿದ್ದರು.