ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ಜೀವ ಬೆದರಿಕೆ ಪ್ರಕರಣ

Prasthutha|

ಬೆಳಗಾವಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

- Advertisement -

 ಬಿಜೆಪಿಯ ಶಾಸಕ ಶ್ರೀಮಂತ ಪಾಟೀಲ್‌ ಮತ್ತು ಪುತ್ರ ಶ್ರೀನಿವಾಸ ಯೋಗೇಶ್ ಪಾಟೀಲ್ ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.  

ದೇವದಾಸ ಶೇರಖಾನೆ ಎಂಬವರು ದೂರು ದಾಖಲಿಸಿದ್ದು, ತನ್ನ ಜಮೀನು ಅತಿಕ್ರಮಿಸಿ ಗೊಬ್ಬರ ಕಾರ್ಖಾನೆ, ಕೆರೆ ನಿರ್ಮಿಸಲಾಗಿದೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಶಾಸಕ, ಶಾಸಕರ ಪುತ್ರ ಮತ್ತು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

ಈ ದೂರು ಆಧರಿಸಿ ಶಾಸಕ ಶ್ರೀಮಂತ ಪಾಟೀಲ ಮತ್ತು ಪುತ್ರ ಶ್ರೀನಿವಾಸ ಯೋಗೇಶ್ ಪಾಟೀಲ್ ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.



Join Whatsapp