ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಪವರ್ ಸ್ಟಾರ್ ಎಂದೇ ಹೆಸರುಗಳಿಸಿರುವ ಪುನೀತ್, ಅವರು ಮೇರು ನಟ ರಾಜ್ ಕುಮಾರ್ ಅವರ ಪುತ್ರರಾಗಿದ್ದಾರೆ.
ವೈದ್ಯರ ತಂಡ ಪುನೀತ್ ಅವರ ಆರೋಗ್ಯ ಪರೀಕ್ಷಿಸುತ್ತಿದ್ದು, ಇನ್ನಷ್ಟೇ ಮಾಹಿತಿ ನೀಡಬೇಕಾಗಿದೆ.