ಎನ್ ಇಪಿ ವಿರೋಧಿಸಿ ಪ್ರತಿಭಟನೆ: CFI ನಾಯಕರ ವಿರುದ್ಧ ಪ್ರಕರಣ

Prasthutha|

ಉಡುಪಿ: ನೂತನ ಶಿಕ್ಷಣ ನೀತಿ ವಿರೋಧಿಸಿ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಆಯೋಜಿಸಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷನ ವಿರುದ್ಧ ಉಡುಪಿ ನಗರ ಪೌರಾಯುಕ್ತರು ದೂರು ದಾಖಲಿಸಿದ್ದಾರೆ.

- Advertisement -


ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಆರೋಪದಲ್ಲಿ ಉಡುಪಿ ನಗರ ಪೌರಾಯುಕ್ತರು ನೀಡಿದ ದೂರಿನ ಅನ್ವಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ಧಾರೆ.

ಉಡುಪಿ ನಗರ ಸಭೆ ಪೌರಾಯುಕ್ತ ಡಾ. ಉದಯ ಕುಮಾರ್ ಶೆಟ್ಟಿ ಅವರು ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣ ದಾಖಲಾಗಿದೆ.
ದಿನಾಂಕ 28/10/2021 ರಂದು ಸಂಜೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಘಟಕದ ಅಧ್ಯಕ್ಷರು ಉಡುಪಿ ನಗರದಲ್ಲಿ ಯಾವುದೇ ಪೂರ್ವಾನುಮತಿಯಿಲ್ಲದೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಉಡುಪಿ ನಗರಸಭಾ ವ್ಯಾಪ್ತಿಯ ಜೋಡುಕಟ್ಟೆಯಿಂದ ಕ್ಲಾಕ್ ಟವರ್ವರೆಗೆ ಜಾಥಾ ನಡೆಸಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಪಾಲನೆ ಮಾಡದೆ, ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.



Join Whatsapp