ಮಡಿಕೇರಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.