ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧವಾಗಿದ್ದಕ್ಕೆ ಅಶ್ಲೀಲ ಪದಗಳಿಂದ ನಿಂದಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಾಮಾಜಿಕ ಜಾಲತಾಣದಲ್ಲಿ ಬಿಯರ್ ಬಾಟಲಿಯ ಚಿತ್ರ ಹಂಚಿಕೊಂಡು, ಪುನೀತ್ ರಾಜ್ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಎಂದು ಅಶ್ಲೀಲ ಹಾಗೂ ಅವಹೇಳನಕಾರಿಯಾಗಿ ಪದ ಬಳಕೆ ಮಾಡಿದ್ದಾನೆ.
ಈ ಬಗ್ಗೆ ಟ್ವೀಟ್ ಮಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.