ಮುಖ್ಯಮಂತ್ರಿ ತವರು ಜಿಲ್ಲೆ ಹಾನಗಲ್ ನಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತೀವ್ರ ಮುಖಭಂಗವಾಗಿದೆ.

- Advertisement -

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು  87,113 ಹಾಗೂ ಬಿಜೆಪಿಯ ಶಿವರಾಜ ಸಜ್ಜನರ ಅವರು 79515 ಮತ್ತು ಜೆಡಿಎಸ್ ನ  ನಿಯಾಜ್ ಶೇಖ್ ಕೇವಲ 921 ಮತಗಳನ್ನು ಪಡೆದಿದ್ದಾರೆ.

ಇನ್ನು ಸಿಂದಗಿ ಹಾಗೂ ಹಾನಗಲ್​ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್​ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.  



Join Whatsapp