ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಪ್ರಾರಂಭ: ಮಾರ್ಗಸೂಚಿ ಪ್ರಕಟ

Prasthutha|

ಬೆಂಗಳೂರು: ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ.

- Advertisement -


ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.


ಕೋವಿಡ್-19 ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

- Advertisement -

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾರ್ಗಸೂಚಿ ಈ ಕೆಳಗಿನಂತಿವೆ
ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಛಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಪಡೆಯಬೇಕು.

ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.

ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸಬೇಕು.

ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು


ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು


ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಬೇಕು.
ಪಾಕೋಪಕರಣ, ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸಬೇಕು.

ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಛಗೊಳಿಸುವುದು


ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು.




Join Whatsapp