ಹೊಸದಿಲ್ಲಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಬಂಧನದ ಬೆನ್ನಲ್ಲೇ ಶಾರುಖ್ ಖಾನ್ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬರೆದ ಪತ್ರದ ಮಾಹಿತಿ ಹೊರಬಿದ್ದಿದೆ.
ಅಕ್ಟೋಬರ್ 14ರಂದು ಬರೆದ ಪತ್ರದಲ್ಲಿ ಇಡೀ ದೇಶವೇ ಶಾರುಖ್ ಖಾನ್ ಮತ್ತು ಅವರ ಕುಟುಂಬದ ಜೊತೆಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
‘ಯಾವ ಮಗುವೂ ಈ ರೀತಿಯ ಆರೈಕೆಯನ್ನು ಪಡೆಯುವುದಿಲ್ಲ. ನೀವು ಜನರಿಗೆ ಮಾಡಿದ ಒಳ್ಳೆಯ ಕೆಲಸಗಳನ್ನು ನಾನು ನೋಡಿದ್ದೇನೆ. ಅವರ ಆಶೀರ್ವಾದ ಮತ್ತು ಪ್ರಾರ್ಥನೆ ನಿಮ್ಮೊಂದಿಗೆ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಆದಷ್ಟು ಬೇಗ ಕುಟುಂಬ ಒಂದಾಗಲಿ’ ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಕ್ಟೋಬರ್ 3 ರಂದು ಆರ್ಯನ್ ಖಾನ್ ನನ್ನು ಬಂಧಿಸಿತ್ತು.