ಕಾಪು : ಬೆಳಗ್ಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಹೆ 66ರ ಕಾಪುವಿನ ಕೋತಲ್ ಕಟ್ಟೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ.
ಕೋತಲ್ ಕಟ್ಟೆಯ ಬಳಿ ವಾಕಿಂಗ್ ಗೆಂದು ತೆರಳಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ತೀರಾ ಬಲ ಬದಿಗೆ ಬಂದು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗೋವಿಂದ ಪೂಜಾರಿಯವರನ್ನು ತುರ್ತಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಸಾವನ್ನಪ್ಪಿದ್ದಾರೆ. ಅಂಬುಲೆನ್ಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ರೋಗಿಯನ್ನು ಬೇರೊಂದು ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.