T-20 ವಿಶ್ವಕಪ್: ಅಫ್ಘಾನಿಸ್ತಾನಕ್ಕೆ ನ್ಯೂಜಿಲೆಂಡ್ ಸವಾಲು, ಭಾರತಕ್ಕೆ ಟೆನ್ಶನ್..!

Prasthutha|

ಅಬುಧಾಬಿ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್-12 ಹಂತದ ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ಭಾನುವಾರ ಅಬುಧಾಬಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲಿದೆ. ಗ್ರೂಪ್-2ರಲ್ಲಿ ಪಾಕಿಸ್ತಾನ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ್ದು, ಉಳಿದ ಒಂದು ಸ್ಥಾನಕ್ಕಾಗಿ ನ್ಯೂಜಿಲೆಂಡ್ , ಅಪ್ಘಾನಿಸ್ತಾನ ಹಾಗೂ ಟೀಮ್ ಇಂಡಿಯಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

- Advertisement -

ಗ್ರೂಪ್-2ರಲ್ಲಿ ಎಲ್ಲಾ ತಂಡಗಳು ತಲಾ 4 ಪಂದ್ಯಗಳನ್ನು ಆಡಿವೆ. ನಾಲ್ಕೂ ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. 4ರಲ್ಲಿ ಮೂರು ಪಂದ್ಯ ಗೆದ್ದಿರುವ ನ್ಯೂಜಿಲೆಂಡ್ ಭಾನುವಾರ ಅಫ್ಘಾನಿಸ್ತಾನದ ವಿರುದ್ಧ ಗೆದ್ದರೆ ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಆದರೆ ಸೋತರೆ ಸಂಪೂರ್ಣ ಚಿತ್ರಣವೇ ಬದಲಾಗಲಿದೆ.

- Advertisement -

ಟೀಮ್ ಇಂಡಿಯಾ ಹಾಗೂ ಅಫ್ಘಾನಿಸ್ತಾನ ಆಡಿರುವ ನಾಲ್ಕು 4 ಪಂದ್ಯಗಳಲ್ಲಿ ತಲಾ ಎರಡು ಗೆಲುವು ಕಂಡಿದೆ. ಆದರೂ ಕೊಹ್ಲಿ ಪಡೆಯ ರನ್’ರೇಟ್ ಉತ್ತಮವಾಗಿರುವ ಕಾರಣ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಅಫ್ಘಾನಿಸ್ತಾನ ಗೆದ್ದರೆ  ನ್ಯೂಜಿಲೆಂಡ್ ತಂಡದೊಂದಿಗೆ 6 ಅಂಕಗಳ ಸಮಬಲ ಸಾಧಿಸಲಿದೆ. ಭಾರತ ತನ್ನ ಕೊನೇಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆಲುವು ಸಾಧಿಸಿದರೆ 6 ಅಂಕಗಳಿಸಲಿದ್ದು, ಭಾರಿ ಅಂತರದಲ್ಲಿ ಗೆಲುವು ಸಾಧಿಸಿದರೆ  ರನ್’ರೇಟ್ ಆಧಾರದಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲಿದೆ.  



Join Whatsapp