ಸಹೋದ್ಯೋಗಿಗಳ ಮೇಲೆಯೇ ಗುಂಡುಹಾರಿಸಿದ ಸಿಆರ್ ಪಿಎಫ್ ಸಿಬ್ಬಂದಿ | ನಾಲ್ವರು ಯೋಧರು ಸ್ಥಳದಲ್ಲೇ ಸಾವು

Prasthutha|

ಛತ್ತೀಸ್ ಗಡ: ಸಹೋದ್ಯೋಗಿಗಳ ಮೇಲೆಯೇ ಸಿಆರ್ ಪಿಎಫ್ ಸಿಬ್ಬಂದಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಯೋಧರು ಸಾವನ್ನಪ್ಪಿ, ಮೂರು ಮಂದಿ ಗಾಯಗೊಂಡ ಘಟನೆ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ನಡೆದಿದ್ದು ಕೂಡಲೇ ಜವಾನನನ್ನು ಬಂಧಿಸಲಾಗಿದೆ.ಗಾಯಗೊಂಡ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಸೋಮವಾರ ಮುಂಜಾನೆ 3.30 ರ ಸುಮಾರಿಗೆ ರಾಯಪುರದ ಲಿಂಗಂಪಲ್ಲಿ ಗ್ರಾಮದ ಸಿಆರ್ ಪಿಎಫ್ ನ 50ನೇ ಬೆಟಾಲಿಯನ್ ನ ಶಿಬಿರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಯೋಧನೊಬ್ಬ ತನ್ನ ಎಕೆ-47 ರೈಫಲ್ ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯ ಪ್ರಕಾರ ತಿಳಿದು ಬಂದಿದೆ, ಹೆಚ್ಚಿನ ಮಾಹಿತಿಗಾಗಿ ಆತನನ್ನು ವಿಚಾರಣೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.



Join Whatsapp