ಕರಾವಳಿ ಸಂಪೂರ್ಣ ದೇಶದ್ರೋಹಿಗಳ ತಾಣವಾಗಿದೆ: ಸಂಸದ ಅನಂತಕುಮಾರ್‌ ಹೆಗಡೆ

Prasthutha|

►”ಮಂಗಳೂರಿಗೆ ತಲೆನೋವಾಗಿರುವುದು ಮೂಲ ನಿವಾಸಿಗಳಲ್ಲ, ಕೇರಳದವರು”

- Advertisement -

ಕಾರವಾರ: ಕರಾವಳಿ ಸಂಪೂರ್ಣ ದೇಶದ್ರೋಹಿಗಳ ತಾಣವಾಗಿದೆ ಎಂದು ಸಂಸದ ಅನಂತಕುಮಾರ್‌ ಹೆಗಡೆ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿನ ಅಭಿವೃದ್ಧಿಯ ಲಾಭವನ್ನು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ. ಮಂಗಳೂರು ಸಂಪೂರ್ಣ ನಮ್ಮ ಕೈ ತಪ್ಪಿ ಹೋಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿಗೆ ತಲೆನೋವಾಗಿರುವುದು ಮಂಗಳೂರಿನ ಮೂಲ ನಿವಾಸಿಗಳಲ್ಲ, ಕೇರಳದವರು. ನಮ್ಮ ಊರಿನ ಅಭಿವೃದ್ಧಿ ಲಾಭವನ್ನು ನಾವೇ ಪಡೆದುಕೊಳ್ಳಬೇಕು. ಮಂಗಳೂರಿನ ಅಭಿವೃದ್ಧಿ ಲಾಭವನ್ನು ಕೇರಳದವರು ಪಡೆದುಕೊಳ್ಳುತಿದ್ದಾರೆ ಎಂದು ತಿಳಿಸಿದ್ದಾರೆ.



Join Whatsapp