ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬಿಟ್ ಕಾಯಿನ್ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಸಿಟ್) ಕ್ಕೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಥವಾ ಕರ್ನಾಟಕ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದ ನಂಟನ್ನು ಬಹಿರಂಗಪಡಿಸಬೇಕೆಂದು ಸುರ್ಜೇವಾಲ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಕರ್ನಾಟಕದ ಬಿಟ್ ಕಾಯಿನ್ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಟ್ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು