ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು

Prasthutha|

ಮೆಲ್ಬೋರ್ನ್: ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೃಹತ್ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಆಘಾತಕಾರಿ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

- Advertisement -

ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಂಗವಾಗಿ ಆಸ್ಟ್ರೇಲಿಯಾ ಪ್ರಧಾನಿ ಮಾರಿಸನ್ ಅವರು ಭಾರತದ ರಾಯಭಾರಿ ರಾಜ್ ಕುಮಾರ್ ಮತ್ತು ಇತರ ನಾಯಕರೊಂದಿಗೆ ಕಳೆದ ಶುಕ್ರವಾರ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ ಕೇಂದ್ರದಲ್ಲಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಇದು “ಅವಮಾನಕರ”. ಈ ಘಟನೆಯಿಂದ ಭಾರತೀಯ-ಆಸ್ಟ್ರೇಲಿಯನ್ ಸಮುದಾಯದಲ್ಲಿ ನಿರಾಶೆ ಉಂಟುಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
“ಈ ಮಟ್ಟದ ಅಗೌರವವನ್ನು ನೋಡುವುದು ಅವಮಾನಕರ ಮತ್ತು ಅತ್ಯಂತ ನಿರಾಶಾದಾಯಕವಾಗಿದೆ” ಎಂದು ಮಾರಿಸನ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

- Advertisement -

ವಿಶ್ವದಲ್ಲೇ ಅತ್ಯಂತ ಯಶಸ್ವಿ ಬಹುಸಂಸ್ಕೃತಿ ಮತ್ತು ವಲಸೆ ರಾಷ್ಟ್ರವಾಗಿರುವ ದೇಶದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.



Join Whatsapp