ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸದಂತೆ ನೋಡಿಕೊಳ್ಳಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Prasthutha|

ಹೊಸದಿಲ್ಲಿ: ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸದಂತೆ ನೋಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಜನರು ಹಸಿವಿನಿಂದ ಸಾಯದಂತೆ ಕೇಂದ್ರ ಸರ್ಕಾರ ‘ಸಮುದಾಯ ಅಡುಗೆ ಯೋಜನೆ’ ಸಿದ್ಧಪಡಿಸಬೇಕು.

- Advertisement -

ಈ ಯೋಜನೆಯನ್ನು ತರುವ ಸಾಂವಿಧಾನಿಕ ಬಾಧ್ಯತೆ ಕಲ್ಯಾಣ ರಾಜ್ಯಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ವಿಭಾಗೀಯ ಪೀಠವು ಈ ಕುರಿತು ಕೂಡಲೇ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.

‘ಸಮುದಾಯ ಅಡುಗೆ ಮನೆ’ ವಿಚಾರವನ್ನು ಕೇಂದ್ರ ಸರ್ಕಾರ ಹೆಚ್ಚು ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂಚಿಸಿದರು.



Join Whatsapp