ಹೊಸದಿಲ್ಲಿ: ದೇಶದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರುವಂತೆ ಆರೆಸ್ಸೆಸ್ ನಾಯಕ ಎಸ್. ಗುರುಮೂರ್ತಿ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮ ದಿನಾಚರಣೆ ನಿಮಿತ್ತ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅರಾಜಕತೆ ತುಂಬಿರುವುದರಿಂದ ಸಮಾಜದ ದಾರಿಗೆ ಅದು ಅಡ್ಡಿಯಾಗಿದೆ ಎಂದು ಹೇಳಿದ್ದಾರೆ.
ಚೀನಾ ಸಾಮಾಜಿಕ ಮಾಧ್ಯಮವನ್ನು ನಿಯಂತ್ರಿಸಲಿಲ್ಲವೇ? ಎಂದು ಪ್ರಶ್ನಿಸಿದ ಗುರುಮೂರ್ತಿ, ಸಾಮಾಜಿಕ ಮಾಧ್ಯಮಗಳ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದರು.
ಫೇಸ್‌ಬುಕ್ ಇಲ್ಲದೆ ನಾವು ಅಸ್ತಿತ್ವದಲ್ಲಿಲ್ಲವೇ? ಮ್ಯಾನ್ಮಾರ್ ಮತ್ತು ಶ್ರೀಲಂಕಾದಂತಹ ದೇಶಗಳಲ್ಲಿ ಅಶಾಂತಿಯನ್ನು ಹುಟ್ಟುಹಾಕುವಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿವೆ’ ಎಂದು ಗುರುಮೂರ್ತಿ ಹೇಳಿದರು.