ಹೊಸದಿಲ್ಲಿ: ಲಂಚ ಪಡೆದು ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನೌಕಾಪಡೆಯ ಕಮಾಂಡರ್ ಅಜಿತ್ ಕುಮಾರ್ ಪಾಂಡೆಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 3ರಂದು ಪಾಂಡೆ ಅವರನ್ನು ಸಿಬಿಐ ಬಂಧಿಸಿತ್ತು. ಪಾಂಡೆ ಮತ್ತು ಬಂಧಿತ ಇತರ ಕೆಲ ಅಧಿಕಾರಿಗಳ ವಿರುದ್ಧ ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಅಧಿಕೃತ ರಹಸ್ಯ ಕಾಯ್ದೆಯಡಿ ತನಿಖೆ ನಡೆಸಲಾಗುತ್ತಿದೆ ಎಂಬುದನ್ನೂ ಕೂಡಾ ಉಲ್ಲೇಖಿಸಲಿಲ್ಲ ಎಂದು ವಿಶೇಷ ನ್ಯಾಯಮೂರ್ತಿ ಅನುರಾಧ ಶುಕ್ಲಾ ಭಾರದ್ವಾಜ್ ಜಾಮೀನು ಆದೇಶದಲ್ಲಿ ತಿಳಿಸಿದ್ದಾರೆ.
ತನಿಖಾ ಸಂಸ್ಥೆಯು ನಿಗದಿತ ಅರವತ್ತು ದಿನ ಅಥವಾ 90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸದಿದ್ದರೆ ಆರೋಪಿಗಳು ಜಾಮೀನು ಪಡೆಯಲು ಅರ್ಹರಾಗುತ್ತಾರೆ.