ಮಾನಹಾನಿ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧದ ವಿಚಾರಣೆ ಮುಂದೂಡಲು ಕೋರ್ಟ್ ಸೂಚನೆ

Prasthutha|

ಮುಂಬೈ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನಹಾನಿ ಮೊಕದ್ದಮೆಯ ವಿಚಾರಣೆಯನ್ನು ಡಿಸೆಂಬರ್ 20ರ ನಂತರದವರೆಗೆ ಮುಂದೂಡಬೇಕು ಎಂದು ಬಾಂಬೆ ಹೈಕೋರ್ಟ್‌ ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

- Advertisement -

ರಫೇಲ್ ಯುದ್ಧವಿಮಾನಗಳ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ 2018ರಲ್ಲಿ ‘ಕಮ್ಯಾಂಡರ್‌ ಇನ್‌ ಥೀಫ್‌’ ಎಂದು ರಾಹುಲ್‌ ಟೀಕಿಸಿದ್ದರು. ರಾಹುಲ್ ಹೇಳಿಕೆಯ ವಿರುದ್ಧ ಬಿಜೆಪಿ ಬೆಂಬಲಿತ ಮಹೇಶ್ ಶ್ರೀಮಲ್‌ ಎಂಬ ವ್ಯಕ್ತಿ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನವೆಂಬರ್‌ 25ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಾಹುಲ್ ಗಾಂಧಿ, ತಮ್ಮ ವಿರುದ್ಧ ದಾಖಲಾಗಿರುವ ದೂರನ್ನು ರದ್ದು ಮಾಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.



Join Whatsapp